ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್ ; 10 ಜನ ಹೋರಾಟಗಾರು 14 ಪೊಲೀಸರಿಗೆ ಗಾಯ..!
ಪತ್ರಿಕಾಗೊಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಬೆಳಗಾವಿ IG, DC, ಕಮೀಷನರ್ & SP.
ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 70 ಜನರ ಮೇಲೆ ಬಿತ್ತು ಕೇಸ್..!
ಬೆಳಗಾವಿ : ಇಂದು ಸುವರ್ಣಸೌಧದ ಮುಂದೆ 2A ಮಿಸಲಾತಿಗಾಗಿ ನಡೆಯುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಬಗ್ಗೆ ಬೆಳಗಾವಿ ಉತ್ತರ ವಲಯ ಪೊಲೀಸ್ ವರಿಷ್ಠಾಧಿಕಾರಿ , ಜಿಲ್ಲಾಧಿಕಾರಿ, ಎಸ್ಪಿ, ಹಾಗೂ ಬೆಳಗಾವಿ ಪೊಲೀಸ್ ಕಮೀಷನರ್ ಪತ್ರಿಕಾಗೊಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.
ನಿನ್ನೆಯ ಹೈಕೋರ್ಟ್ ಆದೇಶದ ಪ್ರಕಾರ ಹೋರಾಟಗಾರರಿಗೆ ಪ್ರತಿಭಟನೆ ಮಾಡಲು ಅವಕಾಶ ಮಾಡಲಾಗಿತ್ತು. ಅದಲ್ಲದೇ ಆದೇಶ ಪ್ರಕಾರ ಅವರಿಗೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಅದರ ಪ್ರಕಾರ ಸಮುದಾಯದ ಮುಖಂಡರು ಹಾಗೂ ಪ್ರತಿಭಟನೆಗಾರರು ಕೂಡ ಒಪ್ಪಿಕೊಂಡಿದ್ದರು. ಆದರೆ ಪ್ರತಿಭಟನೆಗೆ ನಿಯೋಜಿಸಿದ ಸ್ಥಳಬಿಟ್ಟು ಸುವರ್ಣಸೌಧದ ಒಳಗೆ ನುಗ್ಗಲು ಯತ್ನಿಸಿದಾಗ
ಹೋರಾಟಗಾರರು ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಂಡ ಹಿನ್ನಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಪೊಲೀಸರು ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಈ ವೇಳೆ 10 ಜನ ಹೋರಾಟಗಾರರು 14 ಜನ ಪೊಲೀಸರು ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಭಂದಿಸಿದಂತೆ 70 ಜನರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಕುರಿತು ಬಾಗೇವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.