ಬೆಳಗಾವಿ :
ಸರ್ಕಾರದ ನಿರ್ದೇಶನದಂತೆ ಒನಕೆ ಓಬವ್ವ ಜಯಂತಿಯನ್ನು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶನಿವಾರ (ನ.11) ಬೆಳಿಗ್ಗೆ 11 ಗಂಟೆಗೆ ವೇದಿಕೆ ಹಾಗೂ ಉಪನ್ಯಾಸ ಕಾರ್ಯಕ್ರಮದ ಮೂಲಕ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ನ.07) ನಡೆದ ನಡೆದ ಒನಕೆ ಓಬವ್ವ ಜಯಂತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಿಗ್ಗೆ 10 ಗಂಟೆಗೆ ಕೋಟೆ ಕೆರೆಯಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದ್ದು, ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಒಂದು ವೇಳೆ ಮೆರವಣಿಗೆ ರದ್ದುಗೊಳಿಸಿದೆ ಅದರ ಬದಲಿಗೆ ಅದೇ ಅನುದಾನದಿಂದ ಸಮುದಾಯದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ತಿಳಿಸಿದರು.
ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ
ಬಾಲಕಿಯರ ವಸತಿ ನಿಲಯಗಳ ವಿದ್ಯಾರ್ಥಿನಿಯರನ್ನು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೂಚಿಸುವುದಾಗಿ ನಿಲಯಗಳಿಗೆ ಸಂಭಂದಿಸಿದ ಮೇಲಾಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.
ಅದೇ ರೀತಿಯಲ್ಲಿ ಚಿಕ್ಕೋಡಿ, ಬೆಳಗಾವಿ ಭಾಗದಲ್ಲಿನ ಎಸ್.ಎಸ್.ಎಲ್.ಸಿ-ಪಿ,ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲು ಸಮುದಾಯದ ಮುಖಂಡರು ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ಸಂಬಂಧಿಸಿದ ಶಿಕ್ಷಣ ಇಲಾಖೆಯ ಮೂಲಕ ವಿದ್ಯಾರ್ಥಿಗಳ ಮಾಹಿತಿ ಪಡೆದು ಸನ್ಮಾನ ಕಾರ್ಯಕ್ರಮದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಪಾಲಿಕೆ ನಗರ ಸೇವಕ ಸಂದೀಪ ಜಿರಗ್ಯಾಳ,
ಮುಖಂಡರಾದ ಮಲ್ಲೇಶ ಚೌಗಲಾ, ಮಹಾದೇವ ತಳವಾರ, ಯಲ್ಲಪ್ಪ ಹುದಲಿ, ಶ್ರೀರಂಗ ಜೋಶಿ, ರಾಜು ಕೋಲಕಾರ ಹಾಗೂ ಸುಜಾತಾ ಕಾಂಬಳೆ ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.