ಬೆಳಗಾವಿ: ಸರಕಾರಿ ಬಸ್ಸೊಂದು ತಾಂತ್ರಿಕ ವೈಫಲ್ಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 10 ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನಲ್ಲಿ ಶುಕ್ರವಾರ ಸಂಭವಿಸಿದೆ.
ಬಸ್ ಬೆಳಗಾವಿಯಿಂದ ಬೆಳಗುಂದಿಗೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಬಸ್ಸಿನಲ್ಲಿ 30 ಜನ ಪ್ರಯಾಣಿಸುತ್ತಿದ್ದರು ಅವರಲ್ಲಿ 14 ಜನರಿಗೆ ಅಲ್ಪ ಪ್ರಮಾಣದ ಗಾಯಗಳಿವೆ.
ಗಾಯಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಬೆಳಗುಂದಿ ಗ್ರಾಮದವರೇ ಹೆಚ್ಚಾಗಿದ್ದಾರೆ.