ಬೆಂಗಳೂರು :
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ.
2022-23 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ 10-02-2023 ರಿಂದ 25-02-2023 ರವರೆಗೆ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಪ್ರಥಮ ಪಿಯುಸಿ ತಾತ್ವಿಕ ಪರೀಕ್ಷೆಗೂ ಮೊದಲು ಕಾಲೇಜು ಹಂತದಲ್ಲಿ ನಡೆಸಲು ಇಲಾಖೆ ಸೂಚಿಸಿದೆ. ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಹಾಗೂ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಾಗಿಲ್ಲದಿರುವುದರಿಂದ ಶೇಕಡ.100 ರಷ್ಟು ಪಠ್ಯಕ್ರಮಕ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ
2022-23 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು 06-02-2023 ರಿಂದ 28-02-2023ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆ
2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ದಿನಾಂಕ 23-01-2023 ರಿಂದ 04-02-2023 ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿ
2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ಪರೀಕ್ಷೆಗಳನ್ನು ನಡೆಸಲು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಮಾರ್ಚ್ 09 – ಕನ್ನಡ, ಅರೇಬಿಕ್
ಮಾರ್ಚ್ 11 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಮಾರ್ಚ್ 13 – ಅರ್ಥಶಾಸ್ತ್ರ
ಮಾರ್ಚ್ 14 – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 16 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17 – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ & ವೆಲ್ನೆಸ್
ಮಾರ್ಚ್ 18 – ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20 – ಇತಿಹಾಸ, ಭೌತಶಾಸ್ತ್ರ
ಮಾರ್ಚ್ 21 – ಹಿಂದಿ
ಮಾರ್ಚ್ 23 – ಇಂಗ್ಲೀಷ್
ಮಾರ್ಚ್ 25 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 29 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

 
             
         
         
        
 
  
        
 
    