ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಈ ಪಟ್ಟಿಗೆ ಅಧಿಕೃತ ಮುದ್ರೆ ಬೀಳಲಿದೆ ಎಂದು ಹೇಳಲಾಗಿದೆ.
ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದು, ಇಂದು ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ. ದೆಹಲಿಯ ಜಿಆರ್ಜಿ ರಸ್ತೆಯ ಕಾಂಗ್ರೆಸ್ ವಾರ್ ರೂಮಿನಲ್ಲಿ ನಡೆಯುತ್ತಿದ್ದ ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಸಭೆ ಮುಕ್ತಾಯಗೊಂಡಿದೆ.
ಮೇ 20 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಸೇರಿದಂತೆ ಎಂಟು ಶಾಸಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರ ಪಟ್ಟಿಯನ್ನು ರಚಿಸುವುದು ಹಾಗೂ ಖಾತೆಗಳ ಹಂಚಿಕೆಯು ಕಾಂಗ್ರೆಸ್ಗೆ ಒಂದು ಸಾಹಸದ ಕೆಲಸವಾಗಿದೆ, ಏಕೆಂದರೆ ವಿವಿಧ ಸಮುದಾಯಗಳನ್ನು ಸಮತೋಲನಗೊಳಿಸುವುದು ಮತ್ತು ಪ್ರತಿನಿಧಿಸುವುದು ಅಗತ್ಯವಾಗಿದೆ.