ಬೆಳಗಾವಿ; ಬೆಳಗಾವಿ ಕಾರಂಜಿ ಮಠದ 26ನೇ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವವನ್ನು ನ.1 ರಿಂದ ನ.5 ವರೆಗೆ ಆಚರಿಸಲಾಗುತ್ತದೆ. ಇದರ ಅಂಗವಾಗಿ “ಭವ್ಯ ಭಾರತ ದಿವ್ಯ ಪರಂಪರೆ ” ಪ್ರವಚನ ಏರ್ಪಡಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ದಿನಾಂಕ 1 ರಂದು ಸಂಜೆ 6-00 ಗಂಟೆಗೆ ಜರುಗಲಿರುವ ಪ್ರಾರಂಭೋತ್ಸವ ಕಾರ್ಯಕ್ರಮ ಕಾರಂಜಿ ಮಠದ ಶ್ರೀ.ಗುರುಸಿದ್ಧ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜರುಗಲಿದೆ. ಈ ಕಾರ್ಯಕ್ರಮದ ಸಾನಿಧ್ಯವನ್ನು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸುವರು. ನೇತೃತ್ವವನ್ನು ಶೇಗುಣಶಿ ವಿರಕ್ತಮಠದ ಡಾ. ಮಹಾಂತಪ್ರಭು ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಮ್ಮುಖದಲ್ಲಿ ಕಾರಂಜಿ ಮಠದ ಡಾ.ಶಿವಯೋಗಿ ದೇವರು ಉಪಸ್ಥಿತರಿರಲಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಚಿಂತಕ ವೀರೇಶ್ ಪಾಟೀಲ್ ಪ್ರತಿದಿನ ಪ್ರವಚನ ನೀಡಲಿದ್ದಾರೆ.
ನ.5 ರಂದು ಸಂಜೆ 6-00 ಗಂಟೆಗೆ ಜರುಗಲಿರುವ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ನಿಡಸೋಶಿಯ ಜಗದ್ಗುರು ಡಾ. ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು ನೇತೃತ್ವವನ್ನು ಹುಕ್ಕೇರಿ ಹಿರೇಮಠದ ಶ್ರೀ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಯವರು ವಹಿಸಲಿದ್ದಾರೆ, ಸಮ್ಮುಖದಲ್ಲಿ ಹೊಸೂರು ಶ್ರೀ.ಮಡಿವಾಳೇಶ್ವರ ಮಠದ ಶ್ರೀ ಗಂಗಾಧರ ಮಹಾಸ್ವಾಮಿಗಳು ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಗದೀಶ್ ಶೆಟ್ಟರ್ ಆಗಮಿಸಲಿದ್ದಾರೆ ಹಿರಿಯ ಚಿಂತಕ ವೀರೇಶ ಪಾಟೀಲ ಅವರು ಮಂಗಲ ನುಡಿಗಳನ್ನಾಡಲಿದ್ದಾರೆ.


