ಬೆಂಗಳೂರು:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅಲ್ಲದೆ, ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅವಕಾಶ ನೀಡಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಮಾರ್ಚ್ 9ರಿಂದ ಮಾರ್ಚ್ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (2nd PU Exam) ವಿಷಯವಾರು ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇದಕ್ಕಗಿ ಇಲ್ಲಿ https://dpue-exam.karnataka.gov.in/sov2023/frmSOV ಕ್ಲಿಕ್ ಮಾಡಿ ನೋಡಬಹುದಾಗಿದೆ.
25-03-2023 ರಿಂದ 29-03-2023ರವರೆಗೆ ನಡೆಯಲಿರುವ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಆನ್ಲೈನ್ ಮೂಲಕ ಆಕ್ಷೇಪಣೆ ಮಾರ್ಚ್ 25ರಿಂದ ಮಾರ್ಚ್ 27ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು. ಆ ಬಳಿಕ ಸಲ್ಲಿಸಿದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಆಕ್ಷೇಪಣೆಗಳನ್ನು ಆಕ್ಷೇಪಣೆಗಳನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ ಇ-ಮೇಲ್ ವಿಳಾಸ [email protected] ಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಅಥವಾ ಇಲ್ಲಿಯೂ https://dpue-exam.karnataka.gov.in/sov2023/ ಕ್ಲಿಕ್ ಮಾಡಿ ಸಲ್ಲಿಸಬಹುದಾಗಿದೆ.