ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ಪಡೆದ ಮೂರನೇ ಒಂದು ಭಾಗದಷ್ಟು ಜನರಲ್ಲಿ ವರ್ಷದ ಬಳಿಕ ಅಡ್ಡ ಪರಿಣಾಮ ಕಂಡುಬಂದಿದೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ(ಬಿಎಚ್ಯು) ಸಂಶೋಧಕರ ತಂಡ ನಡೆಸಿದ ಅಧ್ಯಯನದ ವರದಿ ತಿಳಿಸಿದೆ.
ಅಧ್ಯಯನದಲ್ಲಿ ಪಾಲ್ಗೊಂಡಿದ್ದ 926 ಮಂದಿ ಪೈಕಿ ಶೇ 50 ರಷ್ಟು ಜನರಲ್ಲಿ ಫಾಲೊ ಅಪ್ ಅವಧಿಯಲ್ಲಿ ಸೋಂಕು ಕಂಡುಬಂದಿದೆ. ಉಸಿರಾಟ ವ್ಯವಸ್ಥೆಯಲ್ಲಿ ಸೋಂಕು ಪತ್ತೆಯಾಗಿದೆ. ಗಂಟಲು ಕೆರೆತ, ಮೂಗು ಸೋರುವಿಕೆ, ಕೆಮ್ಮು ಮುಂತಾದ ಲಕ್ಷಣ ಕಂಡುಬಂದಿವೆ ಎಂದು ಹೇಳಿದೆ.