This is the title of the web page
This is the title of the web page

Live Stream

April 2023
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

5, 8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಕೋರ್ಟ್ ಹೇಳಿದ್ದೇನು ? Board exam for class 5, 8: What did the court say?


 

ಬೆಂಗಳೂರು :
ರಾಜ್ಯದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠದಿಂದ ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಸರ್ಕಾರದ ತೀರ್ಮಾನದಂತೆ ವಿದ್ಯಾರ್ಥಿಗಳಿಗೆ ಮಾ.27ರಿಂದ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತದೆ.

ಸರ್ಕಾರದಿಂದ ಬೋರ್ಡ್‌ ಪರೀಕ್ಷೆಯನ್ನು ನಡೆಸಲು ರಾಜ್ಯ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು, ರದ್ದುಗೊಳಿಸುವಂತೆ ಆಗ್ರಹಿಸಿ ಕೋರ್ಟ್‌ ಮೊರೆ ಹೋಗಿದ್ದರು. ಇದನ್ನು ವಿಚಾರನೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು ಬೋರ್ಡ್‌ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಈ ಆದೇಶದ ವಿರುದ್ಧ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಈ ಅರ್ಜಿ ಕುರಿತು ಇಂದು ವಿಚಾರಣೆ ಮಾಡಿದ ಹೈಕೋರ್ಟ್‌ ವಿಭಾಗೀಯ ಪೀಠವು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಅನುಮತಿಯನ್ನು ನೀಡಿದೆ. ಈ ಮೂಲಕ ಸರ್ಕಾರದ ತೀರ್ಮಾನಕ್ಕೆ ಜಯ ಸಿಕ್ಕಂತಾಗಿದೆ.

ವಿದ್ಯಾರ್ಥಿಗಳನ್ನೂ ಫೇಲ್‌ ಮಾಡುವಂತಿಲ್ಲ: ರಾಜ್ಯದಾದ್ಯಂತ ಎರಡೂ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್‌ ಅನುಮತಿಯನ್ನು ನೀಡಿದೆ. ಆದರೆ, ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಂತಸ ಆಗುವಂತಹ ಒಂದು ವಿಚಾರವೂ ಕೂಡ ಇದರಲ್ಲಿದೆ. ಮಾ.27ರಿಂದ ಪರೀಕ್ಷೆಯನ್ನು ನಡೆಸಬೇಕು. ಕೂಡಲೇ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಎಂದು ಸೂಚನೆ ನೀಡಿದೆ. ಜೊತೆಗೆ, ಪರೀಕ್ಷೆ ಬರೆದ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್‌) ಮಾಡಬಾರದು ಎಂದು ಶಿಕ್ಷಣ ಇಲಾಖೆಗೆ ನಿರ್ದೇಶನವನ್ನು ನೀಡಿದೆ.

ಬೋರ್ಡ್‌ ಪರೀಕ್ಷೆ ಭಯ ಹೋಗಲಾಡಿಸಲು ಅನುಕೂಲ: ಇನ್ನು ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಹಂತದ ಎರಡು ಮೇಲ್ಪಟ್ಟದ ತರಗತಿಗಳಾದ 5ನೇ ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಈ ವೇಳೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್‌ ಮಾಡುವುದಿಲ್ಲ ಎಮದು ತಿಳಿಸಿತ್ತು. ಕೋರ್ಟ್‌ಗೂ ಕೂಡ ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಕೂಡ ವಿದ್ಯಾರ್ಥಿಗಳನ್ನು ಫೇಲ್‌ ಮಾಡುವುದಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪ್ರಸಾರ ಇದರ ಉದ್ದೇಶವಾಗಿದೆ. ಜೊತೆಗೆ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುನಲ್ಲಿ ನಡೆಸುವ ಬೋರ್ಡ್‌ ಪರೀಕ್ಷೆಗೂ ಮೊದಲೇ ಎರಡು ಹಂತದಲ್ಲಿ ಬೋರ್ಡ್‌ ಪರೀಕ್ಷೆಯ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಿ ಮಾನಸಿಕವಾಗಿ ಸಿದ್ಧಗೊಳಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆಯ ಭಯವಿಲ್ಲದೆ ಅಭ್ಯಾಸಮಾಡಲು ಹಾಗೂ ಪರೀಕ್ಷೆ ಬರೆಯಲು ಅನುಕೂಲ ಆಗುತ್ತದೆ.


Jana Jeevala
the authorJana Jeevala

Leave a Reply