ಬೆಂಗಳೂರು :
ಸಂಚಾರ ನಿಯಮ ಉಲ್ಲಂಘನೆಯ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ನೀಡಲಾಗಿದ್ದು ರಿಯಾಯಿತಿಯನ್ನು ಸಾರಿಗೆ ಇಲಾಖೆ ವಿಸ್ತರಿಸಿದೆ.
ಬಾಕಿ ಇರುವ ದಂಡ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ಅವಧಿ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಈ ರಿಯಾಯಿತಿಯು ಮಾರ್ಚ್ 4 ರಿಂದ ಅನ್ವಯವಾಗಲಿದ್ದು 15 ದಿನಗಳ ಕಾಲಾವಕಾಶ ನೀಡಲಾಗಿದೆ.
11-02-2023 ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆ 5 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆ ಅವಧಿಯಲ್ಲಿ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದರು. ಆದರೂ ಬಹಳಷ್ಟು ಮಂದಿ ದಂಡ ಪಾವತಿ ಮಾಡಿರಲಿಲ್ಲ. ಹೀಗಾಗಿ ಮತ್ತೊಂದು ರಿಯಾಯಿತಿಯ ಅವಕಾಶ ನೀಡುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿತ್ತು .
ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ 15 ದಿನ ವಿಸ್ತರಣೆ
