ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ ಕಂಟೇನರ್ವೊಂದು ವೋಲ್ಲೋ ಕಾರಿನ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಐಟಿ ಉದ್ಯಮಿಯಾಗಿರುವ ಚಂದ್ರಯಾಗಪ್ಪ ಅವರು 300 ಜನರಿಗೆ ಉದ್ಯೋಗ ನೀಡಿದ್ದಾರೆ. ಅವರ ಕುಟುಂಬಕ್ಕೆ ಈ ಅಘಾತವುಂಟಾಗಿದೆ.
ಎರಡು ತಿಂಗಳ ಹಿಂದೆ ವೋಲ್ವೋ ಕಾರು ಖರೀದಿ ಮಾಡಿದ್ದ ಅವರು ವೀಕೇಂಡ್ ಪ್ರವಾಸಕ್ಕೆ ಹೊರಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೃತರನ್ನು ವಿಜಯಪುರ ಮೂಲದ ಚಂದ್ರಯಾಗಪ್ಪ ಗೌಳ್ (48), ಗೌರಾಬಾಯಿ (42), ವಿಜಯಲಕ್ಷ್ಮಿ (36), ಜಾನ್ (16), ದೀಕ್ಷಾ (12) ಆರ್ಯಾ (6) ಎಂದು ಗುರುತಿಸಲಾಗಿದೆ.
ನೆಲಮಂಗಲ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ವೀಣಾ ಬಚಾವ್ : ತುಮಕೂರು-ಬೆಂಗಳೂರು ಹೆದ್ದಾರಿಯ ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಉದ್ಯಮಿ ಚಂದ್ರಮ್ ಯೇಗಪ್ಪಗೋಳ ಅವರ ಸಂಬಂಧಿ ವೀಣಾ, ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಚಂದ್ರಮ್ ಯೇಗಪ್ಪಗೋಳ ಅವರು ನನ್ನ ದೊಡ್ಡಪ್ಪನ ಮಗ ಅವರು, ನನಗೂ ಬಾ ಅಂತ ಕರೆದಿದ್ದರು. ಆದರೆ ಕಾರಿನಲ್ಲಿ ಜಾಗ ಇರಲಿಲ್ಲ, ಇವತ್ತು ಬೆಳಗ್ಗೆ ಫೋನ್ ಮಾಡಿದಾಗ ನಾವೂ ತುಮಕೂರು ದಾಟಿ ಹೋಗ್ತಿದ್ದೀವಿ ಅಂದಿದ್ದರು. ಹಾಗಾಗಿ ನಾನು ಸಂಜೆ ಬಸ್ಗೆ ಹೋಗ್ತೀನಿ ಅಂತ ಇದ್ದೆ, ಆದರೆ ಹೀಗೆ ಆಗಿದೆ. ಅವರು ಕ್ರಿಸ್ಮಸ್ ರಜೆ ಅಂತ ಊರಿಗೆ ಹೋಗ್ತಾ ಇದ್ದರು. ವಿಜಯಪುರದವರಾದ ಇವರು ಕಳೆದ 20 ವರ್ಷದಿಂದ ಬೆಂಗಳೂರಿನಲ್ಲಿದ್ದಾರೆ. ಬೆಂಗಳೂರಿನಲ್ಲಿ ಒಂದು ಕಂಪನಿಯಿದೆ, ಹಾಗೂ ಪುಣೆಯಲ್ಲಿ ಹೊಸದಾಗಿ ಶುರು ಮಾಡಿದ್ರು. ಮೃತರು ನನ್ನ ಅಣ್ಣ ಹಾಗೂ ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳು ಎಂದು ಅವರು ಮಾಹಿತಿ ನೀಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ತುಮಕೂರು ಎನ್ ಎಚ್ 48ರ ತಿಪ್ಪಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಈಚರ್ ಕ್ಯಾಂಟರ್ ಹೋಗುತ್ತಿತ್ತು. ಇದೇ ಕ್ಯಾಂಟರ್ನ ಹಿಂದೆ ಚಂದ್ರಮ್ ಅವರ ವೋಲ್ವೋ ಕಾರು ಹೋಗುತ್ತಿತ್ತು. ಇನ್ನು ಪಕ್ಕದ ರಸ್ತೆಯಲ್ಲಿ ಬೆಂಗಳೂರು ಕಡೆಗೆ ಕಂಟೈನರ್ ಲಾರಿಯೊಂದು ವೇಗವಾಗಿ ಹೋಗುತ್ತಿತ್ತು. ನಿಯಂತ್ರಣ ತಪ್ಪಿದ ಕಂಟೇನರ್ ಚಾಲಕ ರಸ್ತೆಯ ಮಧ್ಯದ ಡಿವೈಡರ್ ಮೇಲೆ ಗಾಡಿ ಹತ್ತಿಸಿದ್ದಾರೆ. ಪಕ್ಕದ ರಸ್ತೆಗೆ ಇಳಿದ ಕಂಟೇನರ್ ತುಮಕೂರು ಕಡೆ ಹೋಗ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಕ್ಯಾಂಟರ್ಗೆ ಢಿಕ್ಕಿಯಾದ ಕಂಟೇನರ್, ಅದರ ಹಿಂದೆಯೇ ಬರುತ್ತಿದ್ದ ವೋಲ್ವೋ ಕಾರ್ನ ಮೇಲೆ ಏಕಾಏಕಿ ಬಿದ್ದಿದೆ. ಕಂಟೇನರ್ ಬಿದ್ದ ಪರಿಣಾಮಕ್ಕೆ ಇಡೀ ವೋಲ್ವೋ ಕಾರ್ ಅಪ್ಪಚ್ಚಿಯಾಗಿದೆ. ಆಗ ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಲಾರಿ ಹಾಗೂ ಕ್ಯಾಂಟರ್ ಚಾಲಕ ಇಬ್ಬರಿಗೂ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯಲ್ಲಿ ಐಎಎಸ್ಟಿ ಕಂಪನಿಯ ಮಾಲೀಕ 48 ವರ್ಷದ ಚಂದ್ರಮ್ ಯೇಗಪ್ಪಗೋಳ, 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 16 ವರ್ಷದ ಗ್ಯಾನ್, ಹಾಗೂ ಯೇಗಪ್ಪಗೋಳ ಅವರ ಸಹೋದರಿ 36 ವರ್ಷದ ವಿಜಯಲಕ್ಷ್ಮೀ ಹಾಗೂ ಅವರ ಆರು ವರ್ಷದ ಮಗ ಆರ್ಯ ಸಾವು ಕಂಡಿದ್ದಾರೆ. ಚಂದ್ರಮ್ ಯೇಗಪ್ಪಗೋಳ ಅವರು ಆಟೋ ಮೊಬೈಲ್ ಇಂಡಸ್ಟ್ರಿ ಗೆ ಸಾಫ್ಟ್ವೇರ್ ಪ್ರೊಗ್ರಾಮಿಂಗ್ ಮಾಡಿಕೊಡ್ತಿದ್ದ IAST ಕಂಪನಿಯ ಮಾಲೀಕರಾಗಿದ್ದರು. ಹೊಸ ಆಫೀಸ್ ಓಪನ್ ಮಾಡಲು ನಿರ್ಧರಿಸಿದ್ದ ಚಂದ್ರಮ್ ನಿಟ್ಟಿನಲ್ಲಿಯೇ ಓಡಾಟ ನಡೆಸುತ್ತಿದ್ದರು. ಹೊಸ ಆಫೀಸ್ ಕೆಲಸವು ಕೂಡ ನಡೆಯುತ್ತಿತ್ತು. ಶುಕ್ರವಾರ ರಾತ್ರಿ ಸಿಬ್ಬಂದಿಗಳ ಜೊತೆ ಮೀಟಿಂಗ್ ಮಾಡಿದ್ದ ಚಂದ್ರಮ್, ಕೆಲ ದಿನಗಳು ಬರೋದಿಲ್ಲ ಎಂದು ಹೇಳಿ ಹೋಗಿದ್ದರು. ಆದರೆ, ಈಗ ಬಾರದ ಲೋಕಕ್ಕೆ ಹೋಗಿದ್ದಾರೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ಕಂಪನಿಯ ಪ್ರಧಾನ ಕಚೇರಿಯಿದ್ದು, ಕೆಲಸ ಮಾಡುತ್ತಿದ್ದಾರೆ. ಯುರೋಪ್, ಚೀನಾ ಸೇರಿದಂತೆ ವಿವಿಧ ದೇಶಗಳ ಕ್ಲೈಂಟ್ಸ್ಗಳಿಗೆ ಸೇವೆ ನೀಡುತ್ತಿದ್ದರು.
ಕಾರಿನ ಮೇಲೆ ಲಾರಿ ಬಿದ್ದಿದ್ದೇಗೆ?
ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಯಮಸ್ವರೂಪಿಯಾಗಿ ಬಂದ ಲಾರಿಯೊಂದು ಇಡೀ ಕುಟುಂಬದ 6 ಜೀವಗಳನ್ನು ಬಲಿ ಪಡೆದಿರುವ ಘಟನೆ ಇದು. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದವರು ಮಸಣ ಸೇರಿದ್ದಾರೆ.
ಕಾರಿನಲ್ಲೇ ಉಸಿರು ಚೆಲ್ಲಿದ 6 ಜೀವಗಳು:
ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಮೂಲದವರಾದ ಚಂದ್ರಮ್ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದರು. ಐಎಎಸ್ಟಿ ಸಾಫ್ಟ್ವೇರ್ ಕಂಪನಿ ಮಾಲೀಕರಾಗಿದ್ದರು. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದರು.
ಬೆಂಗಳೂರಿನ ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಪಕ್ಕದ ರಸ್ತೆಯಿಂದ ಏಕಾಏಕಿ ಮೇಲೆರಗಿ ಬಂದ ಲಾರಿ ಚಂದ್ರಮ್ ಕುಟುಂಬ ಪ್ರಯಾಣಿಸ್ತಿದ್ದ ಕಾರಿನ ಮೇಲೆ ಬಿದ್ದಿತ್ತು. ಲಾರಿ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿತ್ತು. ಕಾರಿನಲ್ಲಿದ್ದ 6 ಜೀವಗಳು ಕ್ಷಣಮಾತ್ರದಲ್ಲಿ ಉಸಿರು ಚೆಲ್ಲಿವೆ.
ಬೆಳಿಗ್ಗೆ 11 ಗಂಟೆಗೆ ಸಮಯದಲ್ಲಿ ಬೆಂಗಳೂರು -ತುಮಕೂರು ಎನ್ಹೆಚ್ 48 ಹೈವೇ ರಸ್ತೆ ತಿಪ್ಪಗೊಂಡನಹಳ್ಳಿ ಹತ್ತಿರ KA. 06.AB. 0645 ಈಚರ್ ಕ್ಯಾಂಟರ್ ವಾಹನ ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಹೋಗುವಾಗ ಅದೇ ಸಮಯದಲ್ಲಿ ಕ್ಯಾಂಟರ್ನ ಹಿಂದೆ KA. 01.ND. 1536 ವೋಲ್ವೋ ಕಾರು ಬರುತ್ತಿದ್ದಾಗ ಇದೇ ಸಮಯದಲ್ಲಿ ಬೆಂಗಳೂರು ಕಡೆಗೆ ಹೋಗಲು ಬಂದ KA. 52.B. 3076 ಲಾರಿಯನ್ನು ಕಂಟೇನರ್ ಲಾರಿ ಚಾಲಕ ತನ್ನ ಲಾರಿಯನ್ನು ಅತಿ ವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿ ಬಂದು ರಸ್ತೆಯ ಮಧ್ಯದ ಮೀಡಿಯನ್ ಹತ್ತಿಸಿ ಬೆಂಗಳೂರು ತುಮಕೂರು ರಸ್ತೆಗೆ ಬಂದು ರಸ್ತೆಯಲ್ಲಿ ಬರುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ವೋಲ್ವೋ ಕಾರಿನ ಮೇಲೆ ಲಾರಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿ ಆಗಿದೆ.
ಐಎಎಸ್ಟಿ ಸಾಫ್ಟ್ವೇರ್ ಸಲ್ಯೂಷನ್ಸ್ನ ಸಿಇಒ ಆಗಿದ್ದ ಚಂದ್ರಮ್:
ಐಎಎಸ್ಟಿ ಸಾಫ್ಟ್ವೇರ್ ಸಲ್ಯೂಷನ್ಸ್ನ ಸಿಇಒ ಆಗಿದ್ದ ಚಂದ್ರಮ್, ಆಟೋಮೋಟಿವ್, ಎಂಬೆಡೆಡ್ ಸಾಫ್ಟ್ವೇರ್ ಡೆವಲ್ಪಮೆಂಟ್ ಕ್ಷೇತ್ರದಲ್ಲಿ 18 ವರ್ಷಗಳಿಂದ ತೊಡಗಿಸಿಕೊಂಡಿದ್ದರು. ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಸುರತ್ಕಲ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಪದವಿ ಪಡೆದುಕೊಂಡಿದ್ದರು. ಹೊಸ ಆಫೀಸ್ ಓಪನ್ ಮಾಡಲು ನಿರ್ಧರಿಸಿದ್ದರು. ಹೊಸ ಆಫೀಸ್ ಕೆಲಸವು ನಡೆಯುತ್ತಿತ್ತು. ಎಎಸ್ಟಿ ಸಾಫ್ಟ್ವೇರ್ ಸಲ್ಯೂಷನ್ಸ್ ಕಂಪನಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಚಂದ್ರಮ್ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ತಿಳಿದು ಸಿಬ್ಬಂದಿಗಳು ಅರ್ಧಕ್ಕೆ ಕೆಲಸ ನಿಲ್ಲಿಸಿದ್ದಾರೆ. ಲಾಗ್ ಔಟ್ ಮಾಡಿ ಬೇಸರದಿಂದ ಮನೆಗೆ ಹೋಗಿದ್ದಾರೆ.
ಏನೂ ತಪ್ಪು ಮಾಡದವರಿಗೆ ಯಾಕೆ ಈ ಶಿಕ್ಷೆ: ಶ್ರೀನಿವಾಸ್
ಚಂದ್ರಮ್ ಕಂಪನಿ ಸಿಬ್ಬಂದಿ ಶ್ರೀನಿವಾಸ್ ಎಂಬುವವರು ಪ್ರತಿಕ್ರಿಯಿಸಿದ್ದು, ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದರು. ಇವರ ಜೊತೆಗೆ ತಮ್ಮನ ಪತ್ನಿ ಹಾಗೂ ಅವರ ಮಗು ಎಲ್ಲರು ಇದ್ದರು. ಏನೂ ತಪ್ಪೇ ಮಾಡದೆ ತಮ್ಮ ಪಾಡಿಗೆ ಅವರು ಕಾರಿನಲ್ಲಿ ಹೋಗುತ್ತಿದ್ದರು. ದುರ್ದೈವ ಈ ರೀತಿಯಲ್ಲಿ ಸಾವು ಸಂಭವಿಸಿದೆ. ತುಂಬಾ ದುಃಖ ಆಗುತ್ತಿದೆ ಎಂದಿದ್ದಾರೆ.
ಲಾರಿ ಚಾಲಕ ಆರೀಫ್ ಅನ್ಸಾರಿ ಹೇಳಿದ್ದಿಷ್ಟು :
ಲಾರಿ ಚಾಲಕ ಆರೀಫ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ದಾಬಸ್ ಪೇಟೆ ಜಿಂದಾಲ್ ಕಂಪನಿಯಿಂದ ಅಲ್ಯುಮಿನಿಯಂ ವಸ್ತುಗಳನ್ನು ತುಂಬಿಕೊಂಡು ಬೆಂಗಳೂರಿನ ಜಿಂದಾಲ್ ಕಂಪನಿಗೆ ಬರುವ ವೇಳೆ ಭೀಕರ ಅಪಘಾತ ಆಗಿದೆ. ಕಂಟೇನರ್ ಮುಂದೆ ಏಕಾಏಕಿ ಬಂದಿದ್ದ ಕಾರನ್ನು ತಪ್ಪಿಸಲು ಹೋಗಿ ನನ್ನ ಕಂಟೇನರ್ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಮತ್ತೊಂದು ರಸ್ತೆ ನುಗ್ಗಿ ಲಾರಿಗೆ ಡಿಕ್ಕಿ ಆಯಿತು. ಆಗ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಮತ್ತೆ ನನಗೆ ಏನಾಯಿತು ಗೊತ್ತಿಲ್ಲ, ಆಸ್ಪತ್ರೆಗೆ ಬಂದಾಗ ನನಗೆ ಎಚ್ಚರಿಕೆ ಆಗಿದೆ ಎಂದಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಐಜಿಪಿ ಲಾಬೂರಾಮ್
ಇನ್ನು ಘಟನಾ ಸ್ಥಳಕ್ಕೆ ಭೇಟಿ ಬಳಿಕ ಕೇಂದ್ರವಲಯ ಐಜಿಪಿ ಲಾಬೂರಾಮ್ ಹೇಳಿಕೆ ನೀಡಿದ್ದು, ವೋಲ್ವೋ ಕಾರಿನಲ್ಲಿ ತೆರಳುತ್ತಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾರ ತಪ್ಪು ಅನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.