ಬೆಳಗಾವಿ: ಬೆಳಗಾವಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗುವ ಮಾರ್ಗದಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ರೂಪಾಯಿ 30 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ಇಲ್ಲಿನ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋವಾ ಮದ್ಯ ಲಾರಿಯಲ್ಲಿ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಮಾಹಿತಿ ಇದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾಳಮಾರುತಿ ಪೊಲೀಸರು ಅಕ್ರಮವಾಗಿ ಗೋವಾ ಸಾರಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ವಶಕ್ಕೆ ಪಡೆದು ಚಾಲಕನನ್ನು ಬಂಧನ ಮಾಡಿದ್ದಾರೆ. ದಾಖಲಾತಿ ಇಲ್ಲದ ಸಾರಾಯಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ 900 ಬಾಕ್ಸ್ , 7 ಸಾವಿರ ಲೀಟರ್, 25 ರಿಂದ 30 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.


