ಬೆಂಗಳೂರು:
ವಿಧಾನಸೌಧದಲ್ಲಿ ಜುಲೈ 3 ರಿಂದ 14ರವರೆಗೆ 10 ದಿನ ಬಜೆಟ್ ಅಧಿವೇಶನ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ಮೊದಲ ದಿನ ಜುಲೈ 3ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಜುಲೈ 7 ರಂದು ಮುಖ್ಯಮಂತ್ರಿ ಬಜೆಟ್ ಮಂಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.