ಧಾರವಾಡ:
ಭಾನುವಾರ ಬೆಳಿಗಿನ ಜಾವ ಲಾರಿ ಹಾಗೂ ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸಾವಿಗೀಡಾಗಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ನಡೆದ ವರದಿಯಾಗಿದೆ.
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬರನ್ನು ಬಿಂದುಗೌಡ (35) ಹಾಗೂ ಮತ್ತೊಬ್ಬರನ್ನು ಬಾಪುಗೌಡ (36) ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇವರು ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.