ಶಿಗ್ಗಾಂವ :
ಬಿಜೆಪಿ ಸರಕಾರದ ಅವಧಿಯಲ್ಲಿ ವಿದ್ಯುತ್ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದಿಂದಲೇ ದರ ಹೆಚ್ಚಳದ ಆಜ್ಞೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.
ಕೆಇಆರ್ ಸಿ ಸ್ಟೆಚುಟರಿ ಬಾಡಿ. ಅವರು ಮಾರ್ಚಿನಲ್ಲಿ ವಿದ್ಯುತ್ ದರ ಹೆಚ್ಚಳದ ಪ್ರಸ್ತಾವನೆ ಕೊಟ್ಟರು. ಅದಕ್ಕೆ ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ ಹೆಚ್ಚಳ ಬಗ್ಗೆ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಹೆಚ್ಚಳ ಮಾಡಿದೆ. ಅವರ ಆಜ್ಞೆಯಿಂದಲೇ ದರ ಹೆಚ್ಚಳ ಆಗಿದೆ ಎಂದು ಸ್ಪಷ್ಟಪಡಿಸಿದರು.
ಏಪ್ರಿಲ್ ತಿಂಗಳಿನಿಂದ ವಿದ್ಯುತ್ ಹೆಚ್ಚಳ ಮಾಡಲಾಗಿದೆ. ಇದರಿಂದ ಜನರಿಗೆ ಬಹಳ ದೊಡ್ಡ ಭಾರ ಆಗಿದೆ. ಮುಂಬರುವ ದಿನಗಳಲ್ಲಿ ವಿದ್ಯುತ್ ಕ್ಷೇತ್ರ ಬಹಳ ಸಂಕಷ್ಟಕ್ಕೆ ತುತ್ತಾಗಲಿದೆ. ಉಚಿತ ಗ್ಯಾರಂಟಿಗಳಿಗೆ ಸಾರಿಗೆ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು ಸಬ್ಸಿಡಿ ಕೊಟ್ಟರೆ ಆಗದು. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದು ಹೇಳಿದರು.