ಬೆಂಗಳೂರು:
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆ ಜಾರಿಯಾಗಿ ಎರಡು ದಿನ ಕಳೆದಿದೆ.
ಮೊದಲ ದಿನ ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ಸೋಮವಾರ ಮಧ್ಯಾಹ್ನ 12 ಗಂಟೆವರೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಗಳಲ್ಲಿ ಒಟ್ಟು 5,71,023 ಮಂದಿ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೆಚ್ಚ ₹1.40 ಕೋಟಿ ರಷ್ಟಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಎರಡನೇ ದಿನ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೆ ಒಟ್ಟು 41,34,726 ಮಂದಿ ಮಹಿಳೆಯರು ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ಪ್ರಯಾಣದ ವೆಚ್ಚ ₹8.83 ಕೋಟಿ ಆಗಿದೆ ಎಂದು ಅಂದಾಜಿಸಲಾಗಿದೆ.
ಮಹಿಳೆಯರ ಉಚಿತ ಪ್ರಯಾಣದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ.