ಬೆಳಗಾವಿ :
ಇಲ್ಲಿಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಪ್ರಾಚಾರ್ಯ ಡಾ.ಬಿ. ಜಯಸಿಂಹ ಅವರು ಮಾತನಾಡಿ, ಇಡೀ ವಿಶ್ವಕ್ಕೆ ಭಾರತ ಯೋಗವನ್ನು ಪರಿಚಯಿಸಿದೆ. ಇಂದು ಜಗತ್ತಿನಾದ್ಯಂತ ಯೋಗಕ್ಕೆ ಮಾನ್ಯತೆ ಸಿಕ್ಕಿದೆ. ಪ್ರತಿಯೊಬ್ಬರು ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು.
ಪ್ರಾಧ್ಯಾಪಕರಾದ ಉಮಾ ಹಿರೇಮಠ, ಜ್ಯೋತಿ ಹಿರೇಮಠ, ಸವಿತಾ ಪಟ್ಟಣಶೆಟ್ಟಿ, ಶ್ರೀನಿವಾಸ ಪಾಲಕೊಂಡ, ಮಂಜುನಾಥ ಅಲ್ಲಪ್ಪನವರ, ಸುಪ್ರಿಯಾ ಸ್ವಾಮಿ, ಅಶ್ವಿನಿ ಹಿರೇಮಠ, ರಾಜಶ್ರೀ ಪಾಟೀಲ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ವಿವಿಧ ಯೋಗ ಆಸನಗಳನ್ನು ಪ್ರದರ್ಶಿಸಿದರು.