ದೆಹಲಿ :
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಮತ್ತು ಬಿಜೆಪಿ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ ಗಡ ಮುಂತಾದ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.