ಗೃಹಜ್ಯೋತಿ – ಹಿಂಬಾಕಿ ಇದ್ದರೂ ದೊರಕಲಿದೆ ಯೋಜನೆಯ ಪ್ರಯೋಜನ.
1. ಗ್ರಾಹಕರು ವಿದ್ಯುತ್ ಬಿಲ್ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸಬೇಕು (ಮೂರು ತಿಂಗಳು ಕಾಲಾವಕಾಶ ಇದೆ).
2. ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್’ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್’ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ (ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ).
3. ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು.
4. ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್’ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ.
ಯೋಜನೆಯ ನೋಂದಣಿಗೆ ವಿಳಂಬ ಬೇಡ. ಪ್ರಯೋಜನ ಪಡೆಯಲು ಇಂದೇ ನೋಂದಾಯಿಸಿಕೊಳ್ಳಿ. https://sevasindhugs.karnataka.gov.in/