ಬೆಂಗಳೂರು :
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಕ್ಕಲಿಗ ಮಹಿಳೆಗೆ ಸಿಗುವ ಸಾಧ್ಯತೆ ಇದೆ.
ಕೇಂದ್ರ ಸಚಿವೆ ಹಾಗೂ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಲೆಯುವ ಸಾಧ್ಯತೆ ಇದೆ.
ಈ ಬಗ್ಗೆ ನಾಯಕರಾದ ಯಡಿಯೂರಪ್ಪ ಹಾಗೂ ಬಿ.ಎಲ್. ಸಂತೋಷ್ ಸಹಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಪಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ನೀಡಿದರೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಸಮಾಜಕ್ಕೆ ನೀಡುವ ಸಾಧ್ಯತೆ ಹೆಚ್ಚಾಗಿದ್ದು ಒಕ್ಕಲಿಗರಾಗಿರುವ ಶೋಭಾ ಅವರಿಗೆ ಈ ಸ್ಥಾನ ಸಿಗುವ ಸಾಧ್ಯತೆ ಇದೆ.