ಬೆಂಗಳೂರು :
ವಾಹನ ಸವಾರರಿಗೆ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದೆ. ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿತ್ತು. ಇದೀಗ ಮತ್ತೆ ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
2023ರ ಫೆಬ್ರವರಿ 11ರ ಒಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಶೇ.50 ರಿಯಾಯತಿ ಇರಲಿದೆ. ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಈ ಹಿಂದೆಯೂ ಎರಡು ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ವಿಧಾನಸಭೆ ಘೋಷಣೆಯ ನಂತರ ಇದು ಸ್ಥಗಿತಗೊಂಡಿತ್ತು.