ಬೆಳಗಾವಿ :
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತಾಲೂಕು ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ಜು. 12 ರಂದು ಬೆಳಗ್ಗೆ11 ಗಂಟೆಯಿಂದ 2 ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಸವದತ್ತಿ ತಾಲೂಕಿನ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಸಲಾಗುವುದು.
ಸರ್ಕಾರಿ ಕಛೇರಿಯಲ್ಲಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಲು ಈ ಮೂಲಕ ತಿಳಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ ಗುಪ್ತವಾಗಿ ಮಾಹಿತಿ ನೀಡಿ ಸಭೆಯ ಸದುಪಯೋಗ ಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ ೦೮೩೧-೨೯೫೦೭೫೬ ಅಥವಾ ೦೮೩೧-೨೪೨೧೯೨೨, ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.