ಬಂಟ್ವಾಳ :
ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿಯಾಗಿ ತಿಂಗಳು ಕಳೆದಿದೆ. ಇದೀಗ ವಾರಾಂತ್ಯದ ದಿನಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆಯುತ್ತಿದ್ದಾರೆ. ವಾಯವ್ಯ ಕರ್ನಾಟಕ ಸಾರಿಗೆ ಬಸ್ನಲ್ಲಿ ಮಹಿಳೆಯರು ಬಟ್ಟೆ ಒಣಗಲು ಹಾಕಿದ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ನಾಡಿನ ಸುಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಾರವಾರ ನಡುವೆ ಸಂಚರಿಸುತ್ತಿದ್ದ ಬಸ್ನ ಕಿಟಕಿಗಳಿಗೆ ಮಹಿಳೆಯರು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಇದು ಸಾರ್ವಜನಿಕವಾಗಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.
ಬಸ್ಸಿನಲ್ಲಿ ಪ್ರಯಾಣಿಕರಿಗೆ ಅಸಹ್ಯ ಹುಟ್ಟಿಸುವ ಬಟ್ಟೆಗಳು ನೇತಾಡುತ್ತಿದ್ದು, ಇದು ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ.
ಬಸ್ಸಿನಲ್ಲಿ ಒಣ ಹಾಕಿದ ಬಟ್ಟೆಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.