ಬೆಂಗಳೂರು: ವಿಧಾನಸಭೆಯಿಂದ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸ್ವಸ್ಥಗೊಂಡ ಘಟನೆ ನಡೆಯಿತು.
ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಸ್ಪೀಕರ್ ಖಾದರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸ್ಪೀಕರ್ ಕಚೇರಿ ಮೆಟ್ಟಿಲು ಮೇಲೆ ಕುಳಿತು ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಶಾಸಕರನ್ನು ವಿಧಾನಸಭೆ ಭದ್ರತಾ ಸಿಬ್ಬಂದಿ ಹೊತ್ತೊಯ್ದಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಶಾಸಕರ ಮಧ್ಯೆ ವಾಗ್ವಾದ ನಡೆದಿದೆ.
ಯತ್ನಾಳ್ ಅವರನ್ನು ಭದ್ರತಾ ಸಿಬ್ಬಂದಿ ಹೊತ್ತೊಯ್ಯುವಾಗ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.