ದೆಹಲಿ :
ಲೋಕಸಭಾ ಚುನಾವಣೆಗೆ ರಣತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಹಿಡಿಯಲು ಕಾಂಗ್ರೆಸ್ ಪಕ್ಷ ಮಹತ್ವದ ಸಭೆ ನಡೆಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.