ಅಥಣಿ :
ಸಮಾಜದಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದೆ. ಆದ್ದರಿಂದ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಕಾರ್ಯ ಮಾಡಬೇಕು ಎಂದು
ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಥಣಿ ತಾಲೂಕು ಘಟಕದ ವತಿಯಿಂದ ಪಟ್ಟಣದ ಎಸ್ ಎಸ್ ಎಂ ಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ
[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]
ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಥಣಿ ಶೆಟ್ಟರ ಮಠದ ಶ್ರೀ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಅಥಣಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ಅಧ್ಯಕ್ಷತೆ ವಹಿಸಿದ್ದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ಖ್ಯಾತ ವೈದ್ಯರಾದ ಡಾ. ಮಲ್ಲಿಕಾರ್ಜುನ ಹಂಜಿ, ಮಿಲೇನಿಯಂ ಸ್ಟಾರ್ಚ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಪ್ರಿಯಾ ಎಕ್ಸ್ಪೋರ್ಟ್ ಅಥಣಿಯ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಪಾಟೀಲ ಸೇರಿದಂತೆ ಹಲವಾರು ಗಣ್ಯಮಾನ್ಯರು, ಪತ್ರಕರ್ತರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.