ಬೆಂಗಳೂರು :
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಪಕ್ಷಾಂತರ ಜೋರಾಗಿದೆ.
ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಸದಸ್ಯರನ್ನು ಕಳುಹಿಸಲು ನಿರ್ಧರಿಸಿರುವುದು ಇದೀಗ ಪಕ್ಷಾಂತರ ವದಂತಿಗೆ ಕಾರಣವಾಗಿದೆ.
ಬಿಜೆಪಿ ಶಾಸಕ ಸೋಮಶೇಖರ್ ಕೆಲ ದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೊಗಳಿದ್ದರು. ಜೊತೆಗೆ ಅವರು ಬಿಜೆಪಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಬೆಂಗಳೂರು ಯಶವಂತಪುರ ಕ್ಷೇತ್ರದ ಶಾಸಕರಾಗಿರುವ ಸೋಮಶೇಖರ್ ಸೇರಿದಂತೆ ಹಲವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಮುಂದಾಗಿರುವುದು ತೆರೆ ಹಿಂದಿನ ನೋಟವಾಗಿದೆ.
ಸೋಮಶೇಖರ್ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವೆನಿಸಿದೆ. ಜೊತೆಗೆ ಗೋಪಾಲಯ್ಯ ಅವರು ಸಹ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಯೂ ಹಬ್ಬಿದೆ.