ಚನ್ನಮ್ಮ ಕಿತ್ತೂರು :
ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನಿಯಮಿತವಾಗಿ ಗ್ರಾಮದ ಜಲ ಮೂಲಗಳ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳಲ್ಲಿ ಸಂಗ್ರಹಿತ ನೀರನ್ನು ಪರೀಕ್ಷಿಸಿ ಕುಡಿಯಲು ಯೋಗ್ಯವಾಗಿದೆ ಎಂದು ತಿಳಿದುಕೊಂಡು ನೀರು ಪೂರೈಸಬೇಕು ಎಂದು ತಾಪಂ ಇಓ ಸುಭಾಷ ಸಂಪಗಾಂವಿ ತಿಳಿಸಿದರು.
ತಾಲೂಕು ಪಂಚಾಯತಿ ಕಾರ್ಯಲಯದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತಾಲೂಕಿನ ಎಲ್ಲ ಗ್ರಾಪಂ ಪಿಡಿಓ ಹಾಗೂ ವಾಟರ್ ಮ್ಯಾನ್ ಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ‘ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯಚರಣೆ ಮತ್ತು ನಿರ್ವಹಣೆ ಹಾಗೂ ನೀರಿನ ಗುಣಮಟ್ಟ ಪರೀಕ್ಷೆ’ ಕುರಿತು ಕಾರ್ಯಗಾರ ಉದ್ದೇಶಿಸಿ ಮಾತನಾಡಿದ ಅವರು,
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳ ನೀರನ್ನು ಪರೀಕ್ಷಿಸಿದ ವರದಿಯನ್ನು ತಾಲೂಕು ಪಂಚಾಯತಿಗೆ ಸಲ್ಲಿಸಬೇಕು ಎಂದು ತಿಳಿಸಿದರು. ಈ ತರಬೇತಿಯಲ್ಲಿ ೧೦ ವಿಧದ ನೀರಿನ ಪರಿಕ್ಷೆ ಮಾಡುವುದನ್ನು ತಿಳಿಸಿಕೊಡಲಾಗುತ್ತಿದೆ. ಎಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ಲೋಪ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು. ನಿಷ್ಕಾಳಜಿ ವಹಿಸಬಾರದು ಎಂದು ಎಚ್ಚರಿಕೆ ನೀಡಿದರು.
ಯಾವುದೇ ಕಾರಣಕ್ಕೂ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರು ಪೂರೈಕೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ವಹಿಸಲಾಗುವುದು ಎಂದು ಇಒ ಸಂಪಗಾಂವಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಪಂ.ರಾ) ಸುರೇಶ ನಾಗೋಜಿ , ಸಹಾಯಕ ನಿರ್ದೇಶಕರು(ಗ್ರಾ.ಉ) ಲಿಂಗರಾಜ ಹಲಕರ್ಣಿಮಠ, ಸಹಾಯಕ ಲೆಕ್ಕಾಧಿಕಾರಿಗಳು ಈರಣ್ಣ ಕಮ್ಮಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ DPM ನೀಲಮ್ಮ ಕಮತೆ, RWS ನ ಕಿರಿಯ ಅಭಿಯಂತರರು ಎಸ್.ಎಂ. ಪಾಟೀಲ್, ವಿವೇಕ ಕಣ್ಣೂರು, ಲ್ಯಾಬ್ ಟೇಕ್ನಿಷನ್ U.M. ಮುಲ್ಲಾ, ತಾಲೂಕಿನ ಎಲ್ಲ ಗ್ರಾಪಂ ಗಳ ಅಭಿವೃದ್ಧಿ ಅಧಿಕಾರಿಗಳು, ನೀರು ಗಂಟಿಗಳು, ತಾಪಂ ಸಿಬ್ಬಂದಿಗಳು ಹಾಜರಿದ್ದರು.