ಬೆಳಗಾವಿ :
ಕೆಎಲ್ ಇ ಸಂಸ್ಥೆಯ ಜಿ.ಎ. ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು 2023-24 ನೇ ಸಾಲಿನ ಕ್ಯಾಂಪ್ ವಲಯ ಮಟ್ಟದ ಕ್ರೀಡಾಕೂಟದಲ್ಲಿ 72 ಅಂಕ ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಸಾಧನೆ ಮೆರೆದಿದ್ದಾರೆ.
ವೈಯಕ್ತಿಕ ವಿಭಾಗದಲ್ಲಿ ಪ್ರಕಾಶ ಕೊಟಬಾಗಿ 11 ಅಂಕ ಪಡೆಯುವ ಮೂಲಕ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರ ಸಾಧನೆಗೆ ಕೆಎಲ್ಇ ಸಂಸ್ಥೆಯ ಅಜೀವ ಸದಸ್ಯರು, ಜಿ.ಎ.ಪ್ರೌಢಶಾಲೆಯ ಉಪ ಪ್ರಾಚಾರ್ಯರು, ಬೋಧಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಅವರಿಗೆ ದೈಹಿಕ ಶಿಕ್ಷಕರಾದ ಪಿ.ಎಸ್. ನಿಡೋಣಿ, ಹನಮಂತ ವೀರಗಂಟಿ ತರಬೇತಿ ನೀಡಿದ್ದರು.