ಬೆಳಗಾವಿ :
ಇಲ್ಲಿಯ ಕೊಲ್ಲಾಪುರ ಸರ್ಕಲ್ ಬಳಿಯ ಬಿ.ಬಿ. ಹೊಸಮನಿ & ಸನ್ಸ್ ಅವರ ಪೆಟ್ರೋಲ್ ಬಂಕ್ ಬಳಿ ಕಾರಿನ ಮುಂಭಾಗಕ್ಕೆ ಬೆಂಕಿ ಹೊತ್ತಿಕೊಂಡು ದೊಡ್ಡ ಅನಾಹುತ ತಪ್ಪಿದೆ.
ಮಂಗಳವಾರ ಈ ಘಟನೆ ನಡೆದಿದೆ. ಕಾರಿಗೆ ಇಂಧನ ಹಾಕಿಸಿಕೊಳ್ಳಲು ಆಗಮಿಸಿದಾಗ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ. ಕಾರಿನಲ್ಲಿ ಬೆಂಕಿ ಆವರಿಸಿದ್ದಂತೆ ಅದರಲ್ಲಿದ್ದವರು ತಕ್ಷಣ ಇಳಿದಿದ್ದಾರೆ. ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಘಟನೆಯ ಚಿತ್ರಣ ಪೆಟ್ರೋಲ್ ಬಂಕ್ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.