ಬೆಂಗಳೂರು :
ದೀರ್ಘ ಕಾಲದಿಂದ ಸ್ಥಳ ನಿರೀಕ್ಷಣೆಯಲ್ಲಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ಗ್ಯಾಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕಿಯನ್ನಾಗಿ ನೇಮಿಸಲಾಗಿದೆ.
ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ.
ಸದ್ಯ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಗೆಜೆಟಿಯರ್ ಡಿಪಾರ್ಟ್ಮೆಂಟ್ನ ಮುಖ್ಯ ಸಂಪಾದಕರು!
ಬುಧವಾರ ರಾಜ್ಯದ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ.
ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.
ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ್ ಜಿ ಎನ್ನುವವರನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (ಸೋಶಿಯಲ್ ಆಡಿಟ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಎಸ್ ವಿಕಾಶ್ ಕಿಶೋರ್ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿ ನಗರದ ವಲಯ ಆಯ್ತುಕ್ತರಾಗಿ ನಿಯೋಜನೆ ಮಾಡಲಾಗಿದೆ. ಇದಕ್ಕೂ ಮುನ್ನ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದರು.
ಹುದ್ದೆ ನಿಯೋಜನೆ ಕಾದಿದ್ದ ಲತಾ ಕುಮಾರಿ ಅವರನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ
ಹುದ್ದೆ ನಿಯೋಜನೆ ಕಾದಿದ್ದ ಸಿಎಸ್ ಸುದೀಂದ್ರ ಅವರನ್ನು ಕರಕುಶಲ ಮತ್ತು ಕೈಮಗ್ಗ ಇಲಾಖೆ ನಿರ್ದೇಶಕರ ಹುದ್ದೆಗೆ ನಿಯೋಜನೆ ಮಾಡಲಾಗಿದೆ.
ಸಂಗಪ್ಪ ಅವರನ್ನು ಕಿಯೋನಿಸ್ಕ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ರೇಷ್ಮೆ ಸಂಶೋಧನಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ಕಾರ್ಯಕಾರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.