ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಅಡಿಯಲ್ಲಿ ಸಂಶೋಧನಾ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್ಸೈಟ್ ಗೆ ಭೇಟಿ ನೀಡಬಹುದೆಂದು ಕುಲಸಚಿವೆ ರಾಜಶ್ರೀ ಜೈನಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.