ಬೆಳಗಾವಿ :ಬೆಳಗಾವಿಯಲ್ಲಿ ಗಣೇಶ ದರ್ಶನ ಇದೀಗ ಕಳೆಗಟ್ಟಿದೆ.ಈ ಹಿನ್ನಲೆಯಲ್ಲಿ ಸೋಮವಾರ ಸಂಜೆ ಪೊಲೀಸರು ಹಾಗೂ ವಿವಿಧ ಪಡೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಗಮನ ಸೆಳೆದರು. ಅನಂತ ಚತುರ್ದಶಿಯಂದು ಬೆಳಗಾವಿ ಮಹಾನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ.
ಅಂದು ಸಹಸ್ರಾರು ಸಂಖ್ಯೆಯಲ್ಲಿ ಜನ ಗಣೇಶ ದರ್ಶನ ಹಾಗೂ ಗಣೇಶ ವಿಸರ್ಜನೆಯ ಬೃಹತ್ ಮೆರವಣಿಗೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಥ ಸಂಚಲನ ನಡೆಸಲಾಗಿದೆ.