ಮೈಸೂರು :
ತಮಿಳುನಾಡಿಗೆ 300 ಕ್ಯೂಸೆಕ್ಸ್ ನೀರು ಹರಿಸುವ ಕುರಿತು ಸಮಿತಿ ಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳವರೆಗೆ ಪುನಃ 3000 ಕ್ಯೂಸೆಕ್ಸ್ ನೀರು ಬಿಡಬೇಕೆಂದು ಆದೇಶ ಮಾಡಿದ್ದು, ಸೆಪ್ಟೆಂಬರ್ 27 ರವರೆಗೆ ಆದೇಶ ಜಾರಿಯಲಿದೆ. ಚರ್ಚಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.