ಬೆಂಗಳೂರು :
ಬೆಂಗಳೂರು ಬಂದ್ ನಂತರ ಇನ್ನೆರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯ ಮತ್ತೊಂದು ಬಂದ್ ಎದುರಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ರಾಜ್ಯದ ರೈತರು ಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಹರಿಸದಂತೆ ತಡೆಯಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳ ಒಕ್ಕೂಟ ಸೆಪ್ಟೆಂಬರ್ 29 ಕ್ಕೆ ಕರ್ನಾಟಕ ಬಂದ್ ಕರೆ ನೀಡಿವೆ.
ಮಂಗಳವಾರದಂದು ಬೆಂಗಳೂರು ಬಂದ್ ಯಶಸ್ವಿಯಾದ ರೀತಿಯಲ್ಲಿಯೇ ಶುಕ್ರವಾರ ಕರ್ನಾಟಕ ಬಂದ್ ಯಶಸ್ವಿಗೊಳಿಸುವಂತೆ ಕನ್ನಡ ಸಂಘಟನೆಗಳ ಒಕ್ಕೂಟ ನಾಗರಕರಲ್ಲಿ ಮನವಿ ಮಾಡಿವೆ.