ಬೆಳಗಾವಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 3 ರಂದು ಬೆಳಗಾವಿಗೆ ಆಗಮಿಸುವರು.
ಬೆಳಗ್ಗೆ 11:15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಶೆಫರ್ಡ್ ಇಂಟರ್ ನ್ಯಾಷನಲ್ ವತಿಯಿಂದ ಆಯೋಜಿಸಿರುವ ಅಖಿಲ ಭಾರತೀಯ ರಾಷ್ಟ್ರೀಯ ಕುರುಬರ ಸಮಾವೇಶ ಮತ್ತು 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ ಮತ್ತು ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸುವರು. ನಂತರ ಸಂಜೆ 4:30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.