ಬೆಂಗಳೂರು :
ಕಾವೇರಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರು ಹೆದ್ದಾರಿ ಹಾಗೂ ಬೆಂಗಳೂರಿನಲ್ಲಿ ಅತ್ತಿಬೆಲೆ ಬಳಿ ಹೆದ್ದಾರಿ ಬಂದ್ ಮಾಡಲಿದ್ದೇವೆ. ತಮಿಳುನಾಡು ಸರ್ಕಾರ ನೀರಿನ ವಿಷಯದಲ್ಲಿ ರಾಜಕೀಯ ಮಾಡಬಾರದು ತಮಿಳುನಾಡಿನವರು ಯಾವುದೋ ದೇಶದ ಮೇಲೆ ಯುದ್ಧ ಮಾಡಿದಂತೆ ಮಾತನಾಡುತ್ತಾರೆ ಎಂದು ಆರೋಪಿಸಿದರು.