ಬೆಳಗಾವಿ :
೨೦೨೨-೨೩ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ಅಕ್ಟೋಬರ್ ೨೭, ೨೦೨೩ ರಿಂದ ೨೯ ರವರೆಗೆ ನಡೆಸಲಾಗುವುದು.
ಬೆಳಗಾವಿಯಲ್ಲಿ ನಡೆದ ೨೦೨೨-೨೩ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಈಗಾಗಲೇ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳು ಸದರಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಅರ್ಹ ಕ್ರೀಡಾಪಟುಗಳು ಅಕ್ಟೋಬರ್ ೨೭, ೨೦೨೩ ರಂದು ಬೆಳಿಗ್ಗೆ ೯ ಗಂಟೆಯೊಳಗಾಗಿ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಇಲ್ಲಿ ಅಥವಾ ದೂರವಾಣಿ ಸಂಖ್ಯೆ.೦೮೩೧-೨೯೫೦೩೦೬ ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.