ಬೆಳಗಾವಿ :
ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.
ಇಂದು ಬೆಳಗ್ಗೆ ಪಲಾವ್ ಸೇವಿಸಿದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಇವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.