ಹುಬ್ಬಳ್ಳಿ:
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಬಹುತೇಕ ಡಿಸೆಂಬರ್ 4 ರಿಂದ ಆರಂಭವಾಗಬಹುದು. ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದರು.
ಉತ್ತರ ಕರ್ನಾಟಕ ಜನರ ಆಶಯಕ್ಕೆ ಒತ್ತು ಕೊಟ್ಟು ಅಧಿವೇಶನ ನಡೆಸಲಾಗುವುದು. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.