ಬೆಳಗಾವಿ :
ನಾಗನೂರು ರುದ್ರಾಕ್ಷಿ ಮಠದ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ನ. 8 ರಂದು ಸಂಜೆ 5:00 ಗಂಟೆಗೆ ಬೆಳಗಾವಿ ಶಿವಬಸವ ನಗರದಲ್ಲಿರುವ ಎಸ್ ಜಿ ಬಾಳೆಕುಂದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಗ್ರಹದಲ್ಲಿ ನಾಗನೂರು ರುದ್ರಾಕ್ಷಿ ಮಠದ ಶಿಕ್ಷಣ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಮತ್ತು ಹಳೆಯ ವಿದ್ಯಾರ್ಥಿಗಳ ಸಮಾವೇಶ ಕುರಿತು ರೂಪುರೇಷೆಗಳನ್ನು ನಿರ್ಧರಿಸಲಾಗುತ್ತದೆ. ಆದ ಕಾರಣ ನಾಗನೂರು ರುದ್ರಾಕ್ಷಿ ಮಠದ ಶಿಕ್ಷಣ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳೆಲ್ಲ ಈ ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಬೇಕೆಂದು ಮತ್ತು ದೂರದ ಊರುಗಳಿಂದ ಬರುವ ಹಳೆಯ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ್ ರೊಟ್ಟಿ ಮತ್ತು ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.