ದೆಹಲಿ :
ದೀಪಾವಳಿ ಹಬ್ಬಕ್ಕೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ಘೋಷಿಸಿದೆ. ಕೋವಿಡ್ ಸಂದರ್ಭದಲ್ಲಿ ಆರಂಭಗೊಂಡ ಉಚಿತ ಪಡಿತರ ಕಾರ್ಯಕ್ರಮನ್ನು ಇದೀಗ ಮುಂದಿನ 5 ವರ್ಷಕ್ಕೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
2028 ರ ವರೆಗೆ ಬರೋಬ್ಬರಿ 80 ಕೋಟಿ ಭಾರತೀಯರಿಗೆ ಪ್ರತಿ ತಿಂಗಳು 5 ಕೆಜಿ ಗೋಧಿ ಅಥವಾ ಅಕ್ಕಿ ವಿತರಣೆ ಯೋಜನೆ ವಿಸ್ತರಣೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಛತ್ತೀಸಘಢ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಭಾರತದ 8 ಕೋಟಿ ಜನರು ಗರೀಬ್ ಕಲ್ಯಾಣ್ ಅನ್ನೋ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಈ ಯೋಜನೆ ಆರಂಭಿಸಲಾಗಿತ್ತು. ಉಚಿತವಾಗಿ ಪಡಿತರ ನೀಡುವ ಮೂಲಕ ದೇಶದ ಜನತೆ ಹಸಿವಿನಿಂದ ಇರಬಾರದು ಎಂಬ ಮಹತ್ ಯೋಜನೆ ಜಾರಿಗೆ ಬಂದಿತ್ತು. ಕೋವಿಡ್ ನಿಯಂತ್ರಣದ ಬಳಿಕವೂ ಈ ಯೋಜನೆ ವಿಸ್ತರಣೆಯಾಗತ್ತಲೇ ಬಂದಿತ್ತು. ಕೊನೆಯದಾಗಿ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ 2023ರ ವರಗೆ ವಿಸ್ತರಿಸಲು ಅನುಮೋದನೆ ನೀಡಿತ್ತು. ಇದೀಗ ಈ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸುವುದಾಗಿ ಮೋದಿ ಘೋಷಿಸಿದ್ದಾರೆ.
ನಾನು ಬಡತನ ನೋಡಿದ್ದೇನೆ. ಬಡತನದಲ್ಲೇ ಬೆಳೆದಿದ್ದೇನೆ. ನಾನು ನಿಮ್ಮ ಮಗ. ಈ ಸಂದರ್ಭದಲ್ಲಿ ದೇಶದ ಜನತೆಗೆ ಮಾತನ್ನು ಹೇಳುತ್ತಿದ್ದೇನೆ. ದೇಶದ 80 ಕೋಟಿ ಜನತೆ ಗರೀಬ್ ಕಲ್ಯಾಣ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಈ ಯೋಜನೆಯನ್ನು 2028ರ ವರೆಗೆ ವಿಸ್ತರಿಸಲಾಗುತ್ತದೆ ಎಂದು ಮೋದಿ ಘೋಷಿಸಲಾಗಿದೆ.
2020ರ ಮಾರ್ಚ್ ನಲ್ಲಿ ಈ ಯೋಜನೆಯನ್ನು 3 ತಿಂಗಳಿಗೆಂದು ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ 2020ರ ಜುಲೈ-ನವೆಂಬರ್ಗೆ, 3ನೇ ಹಂತದಲ್ಲಿ 2021-ರ ಮೇ- ಜೂನ್ಗೆ, 4ನೇ ಹಂತದಲ್ಲಿ 2021ರ ಜುಲೈ-ನವೆಂಬರ್, 5ನೇ ಹಂತದಲ್ಲಿ 2021ರ ಡಿಸೆಂಬರ್ನಿಂದ 2022ರ ಮಾರ್ಚ್ ಗೆ ವಿಸ್ತರಣೆ ಮಾಡಲಾಗಿತ್ತು. 6ನೇ ಹಂತದಲ್ಲಿ 2022ರ ಮಾರ್ಚ್ನಿಂದ -ಸೆಪ್ಟೆಂಬರ್ ವರೆಗೆ ವಿಸ್ತರಣೆ ಮಾಡಲಾಗಿತ್ತು. ಬಳಿಕ ಡಿಸೆಂಬರ್ಗೆ ಮುಂದುವರಿಸಲಾಗಿತ್ತು.
ಡಿಸೆಂಬರ್ 2022 ರಲ್ಲಿ ಮತ್ತೆ ಕ್ಯಾಬಿನೆಟ್ ಸಭೆ ನಡೆಸಿದ ಪ್ರಧಾನಿ ಮೋದಿ, ಒಂದು ವರ್ಷಕ್ಕೆ ವಿಸ್ತರಣೆ ಮಾಡಿದ್ದರು. 2023 ರ ಡಿಸೆಂಬರ್ ಅಂತ್ಯದ ವರೆಗೆ ಯೋಜನೆ ವಿಸ್ತರಿಸಲಾಗಿತ್ತು. ಇದೀಗ ಮತ್ತೈದು ವರ್ಷಕ್ಕೆ ಈ ಯೋಜನೆ ವಿಸ್ತರಿಸುವುದಾಗಿ ಮೋದಿ ಘೋಷಣೆ ಮಾಡಲಾಗಿದೆ. ಶೀಘ್ರದಲ್ಲೇ ಈ ಕುರಿತು ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ.