ಕೊಲ್ಕತ್ತಾ :
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ನಲ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ 119 ಎಸೆತಗಳನ್ನು ಎದುರಿಸಿದ ವಿರಾಟ್ 10 ಬೌಂಡರಿ ಸಹಿತ ತಮ್ಮ ಶತಕ ಪೂರೈಸಿದರು.
ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ನಲ್ಲಿ ದಾಖಲೆಯ ಶತಕ ಸಿಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ 119 ಎಸೆತಗಳನ್ನು ಎದುರಿಸಿದ ವಿರಾಟ್ 10 ಬೌಂಡರಿ ಸಹಿತ ತಮ್ಮ ಶತಕ ಪೂರೈಸಿದರು. ಈ ಶತಕದೊಂದಿಗೆ ವಿರಾಟ್ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು 49 ಶತಕ ಸಿಡಿಸಿದ್ದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ ಕೇವಲ 277 ಇನ್ನಿಂಗ್ಸ್ಗಳಲ್ಲಿ ಮೈಲುಗಲ್ಲನ್ನು ತಲುಪಿದ್ದರೆ, 2012 ರಲ್ಲಿ ಸಚಿನ್ 452 ಇನ್ನಿಂಗ್ಸ್ಗಳಲ್ಲಿ ಈ ದಾಖಲೆಯನ್ನು ನಿರ್ಮಿಸಿದ್ದರು.