ಬೆಳಗಾವಿ :
ಮೊಬೈಲ್ ಟವರ್ ವಿಷಯವಾಗಿ ರಮೇಶ ಪಾಟೀಲ ಎಂಬುವರ ಮೇಲೆ ಹಲ್ಲೆ ಎಸಗಿದ ಆರೋಪದ ಮೇರೆಗೆ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ ಅವರನ್ನು ಪೊಲೀಸರು ರವಿವಾರ ತಡರಾತ್ರಿ ಬಂಧಿಸಿದ್ದಾರೆ.
ಅವರ ಬಂಧನಕ್ಕೆ ಒತ್ತಾಯಿಸಿ ಎಂಇಎಸ್ ಮುಖಂಡ ರಮಾಕಾಂತ ಕೊಂಡುಸ್ಕರ ಅವರ ನೇತೃತ್ವದಲ್ಲಿ ರವಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಟಿಳಕವಾಡಿ ಪೊಲೀಸರು ರವಿವಾರ ತಡರಾತ್ರಿ ಜವಳ್ಕರ್ ಅವರನ್ನು ಬಂಧಿಸಿದ್ದಾರೆ.
ಮೊಬೈಲ್ ಟವರ್ ಅಳವಡಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಭಿಜಿತ್ ಜವಳಕರ್ ಮತ್ತು ಸ್ಥಳೀಯ ನಿವಾಸಿ ರಮೇಶ ಪಾಟೀಲ ನಡುವೆ ಕಳೆದ ಗುರುವಾರ ಭಾಗ್ಯನಗರದಲ್ಲಿ ತೀವ್ರ ವಾಗ್ವಾದ ನಡೆದಿತ್ತು.
ಘಟನೆಯ ನಂತರ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿ ರಮೇಶ ಪಾಟೀಲ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.
ಈ ನಡುವೆ ಭಾನುವಾರ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶ್ರೀರಾಮಸೇನೆ ಹಿಂದೂಸ್ತಾನ್ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಅಭಿಜಿತ್ ವಿರುದ್ದ ಕ್ರಮಕ್ಕೆ ಒತ್ತಾಯಿದ್ದರು.
ಭಾಗ್ಯ ನಗರದ 9ನೇ ಕ್ರಾಸ್ನ ಮನೆ ಮೇಲೆ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.
ಮೊಬೈಲ್ ಟವರ್ ಅಳವಡಿಸಲು ಮುಂದಾಗಿದ್ದ ರಮೇಶ ಪಾಟೀಲ ಅವರ ಮೇಲೆ ಅಭಿಜಿತ ಜವಳಕರ ಹಲ್ಲೆ ನಡೆಸಿರುವುದು ಖಂಡನೀಯ. ಒಬ್ಬರ ಮನೆ ಮೇಲೆ ಮೊಬೈಲ್ ಟವರ್ ಅಳವಡಿಸುತ್ತಿರುವುದನ್ನು ತಪಾಸಿಸುವ ಅಧಿಕಾರ ಇವರಿಗೆ ಯಾರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದರು.
ಸ್ಥಳೀಯ ಶಾಸಕರ ಪ್ರಭಾವದಿಂದಾಗಿ ಪೊಲೀಸರು ರಮೇಶ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಇದನ್ನು ಹಿಂದಕ್ಕೆ ಪಡೆಯಬೇಕು. ತಕ್ಷಣವೇ ಅಭಿಜಿತ್ ಜವಳಕರ ಬಂಧಿಸಬೇಕು ಎಂದು ಆಗ್ರಹಿಸಿದ್ದರು.
ನಂತರ ಪೊಲೀಸರು ಅಭಿಜಿತ್ ಜವಳಕರ ಅವರನ್ನು ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
ಅವರ ಮೇಲೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 392 ರ ಅಡಿಯಲ್ಲಿ ಪ್ರಕರಣ ದಾಖಲಾಗಿಲಾಗಿದೆ.
ರಮೇಶ ಪಾಟೀಲ ವಿರುದ್ಧವೂ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 506,394,307,504,147,143,148 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.