ಬೆಳಗಾವಿ:
ಪ್ರಸಕ್ತ 2022-23 ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ
ಪ್ರವಾಹದಿಂದಾಗಿ ಆಗಿರುವ ಬೆಳೆ ಹಾನಿ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಅಳವಡಿಸಿದ 24,094 ರೈತರಿಗೆ ಒಟ್ಟು 33,50,46,988
ರೂಪಾಯಿಗಳ ಪರಿಹಾರವನ್ನು ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ
ಸಂದಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.