ಬೆಂಗಳೂರು :
ಕಳೆದ ವರ್ಷ ನಿಧನರಾದ ಕನ್ನಡ ನಾಡಿನ ಹೆಸರಾಂತ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಬಗ್ಗೆ ಇಂದು ಮಧ್ಯಾಹ್ನ 1.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕಾರ್ಯಕ್ರಮದ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ.
ಕರ್ನಾಟಕ ರಾಜ್ಯೋತ್ಸವದಂದು ಈ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ.
ಪವರ್ ಸ್ಟಾರ್
ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರು ಕಳೆದ ವರ್ಷದ ಅಕ್ಟೋಬರ್ 29 ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಅವರ ನಿಧನಕ್ಕೆ
ಇಡೀ ಕನ್ನಡನಾಡು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದರು. ಅಪಾರ ಸಂಖ್ಯೆಯ ಅಭಿಮಾನಿ ವರ್ಗವನ್ನು ಹೊಂದಿರುವ ಪುನೀತ್ ರಾಜ್ ಕುಮಾರ್
ತೆರೆಮರೆಯಲ್ಲಿ ಸಮಾಜ ಸೇವಾ ಕೈಂಕರ್ಯ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಸೇವಾ ಚಟುವಟಿಕೆ ಗಮನಿಸಿ ಕರ್ನಾಟಕ ಸರಕಾರ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರದಾನ ಮಾಡಲು ನಿರ್ಣಯ ತೆಗೆದುಕೊಂಡಿದೆ
ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.