ಬೆಂಗಳೂರು :
ಸವದತ್ತಿ ಶಾಸಕ ಹಾಗೂ ವಿಧಾನ ಸಭಾ ಉಪಾಧ್ಯಕ್ಷ ಆನಂದ ಮಾಮನಿ ನಿಧನರಾಗಿದ್ದಾರೆ. ಆನಂದ ಮಾಮನಿ ಅವರಿಗೆ
56 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನಂದ ಮಾಮನಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ನಮ್ಮ ಪಕ್ಷದ ಶಾಸಕರು, ಮಾನ್ಯ ವಿಧಾನಸಭೆಯ ಉಪಾಧ್ಯಕ್ಷರೂ ಆಗಿರುವ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.
ಶನಿವಾರ ರಾತ್ರಿ ಅವರು ನಿಧನರಾಗಿದ್ದು ಭಾನುವಾರ ಸಂಜೆ ಸವದತ್ತಿಯಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.