ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ ಎಂದು ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ನಿಂದ ನನಗೆ ಆಹ್ವಾನ ಬಂದಿರುವ ನಿಜ. ಆದರೆ, ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಾದರೂ ನೀವು ಸ್ಪರ್ಧೆ ಮಾಡಿ ಎಂದು ಕಾಂಗ್ರೆಸ್ ಆಫರ್ ನೀಡಿದೆ. ಆದರೆ, ನನಗೆ ಬಿಜೆಪಿ ಪಕ್ಷ ಎಲ್ಲವನ್ನೂ ಕೊಟ್ಟಿದೆ. ನಾನು ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

            
        
        
        
 
        