ಬೆಳಗಾವಿ : ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿ.ಇ.ಒ. ಆದ ರಾಹುಲ ಶಿಂಧೆ ಅವರು ಗುರುವಾರ (ಏ.25) ರಂದು ಯಮಕನಮರಡಿ ಗ್ರಾಮದಲ್ಲಿನ ಬಿಸಿ ಊಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಕ್ಕಳಿಗೆ ನೀಡಲಾಗುವ ಊಟವು ಗುಣಮಟ್ಟದಿಂದ ಕೂಡಿರಬೇಕು. ಆಹಾರ ತಯಾರಿಕೆ ಸ್ಥಳದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೇ ನೀಡುವುದರ ಜೊತೆಗೆ ಸುರಕ್ಷತೆಯ ಬಗ್ಗೆಯು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು. ತದನಂತರ ಮಕ್ಕಳೊಂದಿಗೆ ಮಾತನಾಡಿ ಪ್ರತಿದಿನ ಒದಗಿಸುವ ಬಿಸಿ ಊಟದ ಗುಣಮಟ್ಟ ಹಾಗೂ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಅಭಿಯಾನದ ಸಹಾಯಕ ನಿರ್ದೇಶಕಿ ಸವಿತಾ ಹಳಕಿ ಉಪಸ್ಥಿತರಿದ್ದರು.