ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕಾಗಿರುತ್ತದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಕಾರ್ಯಾಲಯ, ಬಸವ ಸರ್ಕಲ್, ತಾಲೂಕು ಆಡಳಿತ ಸೌಧ, ಚಿಕ್ಕೋಡಿ ಇಲ್ಲಿ ಏ.26 ಶುಕ್ರವಾರ ದಂದು ಬೆಳಿಗ್ಗೆ 11ಗಂಟೆಗೆ ತಮ್ಮ ಲೆಕ್ಕಪತ್ರಗಳನ್ನು ಪರಿಶೀಲನೆಗೆ ಸಲ್ಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.